Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka idli ಕರ್ನಾಟಕದಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
ಕರ್ನಾಟಕದೇಶಪ್ರಮುಖ

Karnataka idli ಕರ್ನಾಟಕದಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

Share
2 Min Read
SHARE

newsics.com

ನವದೆಹಲಿ: ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್‌ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ), ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ.

ಹೋಟೆಲ್‌ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್‌ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆ ತನಿಖೆಗೆ ಸೂಚಿಸಿದೆ.

‘ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್‌ ಹಾಳೆ ಬಳಕೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಸೂಚಿಸಲಾಗಿದೆ’ ಎಂದು ಎಫ್‌ಎಸ್‌ಎಸ್‌ಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಗ್ಗೆ ಮಾತನಾಡಿರುವ ಪ್ರಾಧಿಕಾರದ ಸಿಇಒ ಜಿ. ಕಮಲ ವರ್ಧಮ ರಾವ್‌, ‘ಪ್ಲಾಸ್ಟಿಕ್‌ನಿಂದ ಬಿಸ್ಫೆನಾಲ್, ಥಾಲೇಟ್‌ನಂತಹ ಹಾನಿಕಾರಕ ರಾಸಾಯನಿಕಗಳು ಆಹಾರವನ್ನು ಸೇರುತ್ತವೆ. ಅಧಿಕ ತಾಪಮಾನದಡಿ ಕಡಿಮೆ ಗುಣಮಟ್ಟದ ಅಥವಾ ಆಹಾರಕ್ಕೆ ಬಳಸಬಾರದಂತಹ ಪ್ಲಾಸ್ಟಿಕ್‌ ಉಪಯೋಗದಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ’ ಎಂದು ತಿಳಿಸಿದ್ದಾರೆ.

ಇಡ್ಲಿ ಬೇಯಿಸಲು ಸೂಕ್ತ ವಿಧಾನವನ್ನು ಸೂಚಿಸಲಾಗಿದ್ದು, ಅದಕ್ಕೆ ಅನುಮೋದಿಸಲಾದ ವಸ್ತುಗಳನ್ನೇ ಬಳಸುವುದು ಕಡ್ಡಾಯವಾಗಿದೆ.

ಈ ನಡುವೆ, ರಾಜ್ಯದ ಹಲವೆಡೆ ಇಡ್ಲಿ ಬೇಯಿಸಲು ಪ್ಲಾಸ್ಟಿಕ್‌ ಬಳಕೆ ಹೆಚ್ಚುತ್ತಿದ್ದು, ಇದರಿಂದ ಆರೋಗ್ಯಕ್ಕೆ ಮಾರಕವಾಗುವ ಕ್ಯಾನ್ಸರ್‌ಕಾರಕ ಅಂಶ ಇಡ್ಲಿ ಜತೆ ಸೇರುತ್ತಿದೆ. ಹೀಗಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್‌ ಬಳಕೆ ನಿಷೇಧಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ರಾಜ್ಯದ 251 ಆಹಾರ ಕೇಂದ್ರಗಳಲ್ಲಿ ಆಹಾರಗಳ ಗುಣಮಟ್ಟ ಪರೀಕ್ಷೆ ನಡೆಸಿದ್ದು, ಈ ಪೈಕಿ 51 ಆಹಾರದ ಮಾದರಿಗಳು ಅಸುರಕ್ಷಿತ ಎಂದು ದೃಢಪಟ್ಟಿದೆ.

ಈ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ ಶೀಟ್‌ ಬಳಸಿ ಇಡ್ಲಿ ಬೇಯಿಸುತ್ತಿರುವುದು ಕಂಡುಬಂದಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್‌ ಶೀಟ್‌ ಬಳಕೆ ಮಾಡುವಂತಿಲ್ಲ. ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಗೋಬಿ ಮಂಚೂರಿ, ಕಬಾಬ್‌, ಕಾಟನ್‌ ಕ್ಯಾಂಡಿಗಳ ತಯಾರಿಕೆಯಲ್ಲಿ ಬಳಸುವ ಫುಡ್‌ ಕಲರ್‌ ಕ್ಯಾನ್ಸರ್‌ಕಾರಕ ಎಂಬ ಕಾರಣಕ್ಕೆ ರಾಜ್ಯದಲ್ಲಿ ನಿಷೇಧಿಸಲಾಗಿದೆ.

ಆಸ್ತಿಗಾಗಿ ಹೆತ್ತ ತಾಯಿಯ ತೊಡೆ ಕಚ್ಚಿದ ಮಗಳು! ‘ನೀನು ಸಾಯೋದೇ ಇಲ್ವಾ’ ಎಂದು ತಾಯಿ‌ ಮೇಲೆ ಹಲ್ಲೆ

Astrology ಭಾನುವಾರ ಹೇರ್ ಕಟ್ ಮಾಡಿಸೋ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಈ ವರದಿ ಓದಿ

Rambha: ಮತ್ತೆ ಸಿನಿಮಾಗೆ ಬರ್ತಾರೆ 90ರ ದಶಕದ ನಟಿ ರಂಭಾ

TAGGED:Use of plastic for making idli in Karnataka: Central government orders investigation
Share This Article
Facebook Twitter Copy Link Print
Previous Article ಆಸ್ತಿಗಾಗಿ ಹೆತ್ತ ತಾಯಿಯ ತೊಡೆ ಕಚ್ಚಿದ ಮಗಳು! ‘ನೀನು ಸಾಯೋದೇ ಇಲ್ವಾ’ ಎಂದು ತಾಯಿ‌ ಮೇಲೆ ಹಲ್ಲೆ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 02-03-2025, ಭಾನುವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?