newsics.com
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ನಟ್ಟು, ಬೋಲ್ಟ್ ಹೇಳಿಕೆ ಹಾಗೂ ಸ್ಯಾಂಡಲ್‌ವುಡ್ ನಟ, ನಟಿಯರ ಯುದ್ಧಕ್ಕೆ ಮತ್ತೊಂದು ರೋಚಕ ತಿರುವು ಸಿಕ್ಕಿದೆ. ಪರ-ವಿರೋಧದ ಚರ್ಚೆಯ ಮಧ್ಯೆ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ಅವರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಫೇಸ್‌ಬುಕ್ ಲೈವ್‌ನಲ್ಲಿ ಬಂದು ಮಾತನಾಡಿರುವ ಚಕ್ರವರ್ತಿ ಚಂದ್ರಚೂಡ್ ಅವರು ಮಂಡ್ಯ ಶಾಸಕ ರವಿ ಗಣಿಗ ಅವರಿಗೆ ಸುದೀಪ್ ಹೆಸರನ್ನು ಸರಿಯಾಗಿ ಹೇಳುವ ಧೈರ್ಯವೂ ಇಲ್ಲ. ಸುಮ್ಮನೆ ಆರೋಪ ಮಾಡೋದಲ್ಲ. ಆಮಂತ್ರಣ ಕೊಡದೆ ಸುದೀಪ್ ಅವರು ಹೇಗೆ ಬರೋಕೆ ಸಾಧ್ಯ. ಸಾಧು ಕೋಕಿಲ ಅವರು ಮಾಡಿರುವ ಚಿತ್ರೋತ್ಸವದ ಅಪಭೃಂಶ ಇದು ಎಂದು ಕಿಡಿಕಾರಿದ್ದಾರೆ.
ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ್ದೀರಿ. 2004ರಿಂದ ಈವರೆಗೆ ಅವರು ಅವಾರ್ಡ್ ತೆಗೆದುಕೊಂಡಿಲ್ಲ. ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ಈ ಮೊದಲು ಅವಾರ್ಡ್ಗೆ ಕೊಡುತ್ತೇವೆ ಎಂದು ಕೊಟ್ಟಿಲ್ಲ. ರಾಜ್ಯ ಪ್ರಶಸ್ತಿ ಎಂದರೆ ಅಸಹ್ಯವಾಗಿ ಹೋಗಿದೆ. ಅವಾರ್ಡ್ ನಿರಾಕರಿಸೋದಕ್ಕೆ ಅವರದ್ದೇ ಆದ ಕಾರಣ ಇರುತ್ತದೆ’ ಎಂದು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ.
ರಾಜಕಾರಣಿಗಳು ಹಿಟ್ಲರ್ ನೀತಿ ತೋರಬಾರದು. ಕನ್ನಡಾಭಿವೃದ್ಧಿ ಕಾರ್ಯಕ್ರಮ ಏನು ಮಾಡ್ತಿದೆ ಹೇಳಿ. ಚಿತ್ರರಂಗವನ್ನು ನಾಶ ಮಾಡೋಕೆ ಆಗಲ್ಲ. ಚಿತ್ರೋದ್ಯಮದವರಿಗೆ ಬಯ್ಯೋದು ಕೆಲಸ ಆಗಿದೆ. ಸಾಧು ಕೋಕಿಲ ಕೊಟ್ಟ ತಪ್ಪು ಮಾಹಿತಿಗೆ ಈ ರೀತಿ ಆಗಿರೋದು’ ಎಂದಿದ್ದಾರೆ.
ಉಪಮುಖ್ಯಮಂತ್ರಿಯನ್ನು ಸಿಎಂ ಮಾಡಿದರೆ ರಾಜ್ಯಕ್ಕೆ ಕಷ್ಟ ಆಗುತ್ತದೆ. ಓರ್ವ ಹಿಟ್ಲರ್ ನ ತಂದು ಕೂರಿಸಬಾರದು. ಈ ವರ್ತನೆ ಬಿಟ್ಟರೆ ದೊಡ್ಡ ನಾಯಕರಾಗ್ತೀರಾ. ಪುಡಿ ರೌಡಿ ತರ ಮಾತನಾಡೋದು ಬಿಟ್ಟುಬಿಡಿ. ನಿಮ್ಮ ಸಾಧುಕೋಕಿಲ ತಪ್ಪು ಮಾಡಿದಾರೆ. ಅದನ್ನು ಮೊದಲು ಸರಿ ಮಾಡಿ’ ಎಂದು ಸವಾಲು ಹಾಕಿದ್ದಾರೆ ಚಕ್ರವರ್ತಿ ಚಂದ್ರಚೂಡ್.