newsics.com
ಬೆಂಗಳೂರು: ಬೇಸಿಗೆಯ ಸುಡು ಬಿಸಿಲಿನ ನಡುವೆ ಚಿನ್ನದ ರೇಟ್ ಕೂಡ ಕಣ್ಣುಕುಕ್ಕುವಂತಿದ್ದು, ಬೆಲೆ ಏರುತ್ತಿದ್ದರೂ ಚಿನ್ನ ಕೊಳ್ಳಬೇಕಾಗಿದೆ ಎಂದು ಗ್ರಾಹಕರು ಕೈ ಕೈ ಹಿಸುಕುತ್ತಿದ್ದಾರೆ. ಹೇಳಿ ಕೇಳಿ ಈಗ ಮದುವೆ ಸೀಸನ್ ಹಾಗಾಗಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿಯೇ ಇರುತ್ತದೆ.
ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 70 ರೂನಷ್ಟು ಏರಿಕೆ ಆಗಿದೆ. ಒಂದು ಗ್ರಾಮ್ ಒಡವೆ ಚಿನ್ನದ ಬೆಲೆ 7,940 ರೂ ಇದ್ದದ್ದು 8,010 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆಯೂ 8,700 ರೂ ಗಡಿ ದಾಟಿದೆ. ಬಹಳ ದಿನಗಳಿಂದ ಬಹುತೇಕ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇಂದು ಏರಿಳಿತಗಳನ್ನು ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 80,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 87,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 80,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,800 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 04ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,380 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,540 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,380 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ