newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದು ಗ್ಯಾರೆಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ.. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದು ಗ್ಯಾರೆಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ.. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.
ಶುಕ್ರವಾರ ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದು, ಕೃಷಿ, ಶಿಕ್ಷಣ, ಆರೋಗ್ಯ, ಸೇರಿದಂತೆ ಎಲ್ಲಾ ವಲಯಗಳಿಗೂ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡುವ ನೀರಿಕ್ಷೆಯಿದೆ. ರೈತರು, ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡದವರ ಸಬಲೀಕರಣದ ಹೊಸ ಕಾರ್ಯಕ್ರಮಗಳು ನಾಳೆ ಬಜೆಟ್ನಲ್ಲಿ ಘೋಷಣೆ ಆಗುವ ಸಾಧ್ಯತೆಯಿದೆ.
ಹಿಂದಿನ ಬಜೆಟ್ನಲ್ಲಿ, ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP) 28,09,063 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು, 1,05,246 ಕೋಟಿ ರೂ. ಸಾಲ ಪ್ರಸ್ತಾಪಿಸಲಾಗಿತ್ತು, ಇದು 2023-24 ರ ಹಣಕಾಸು ವರ್ಷಕ್ಕೆ ಹೋಲಿಸಿದರೆ (83,818 ಕೋಟಿ ರು.) ಶೇ. 23 ರಷ್ಟು ಹೆಚ್ಚಾಗಿದೆ.
ಈ ಬಾರಿ, ರಾಜ್ಯದ ಆದಾಯ 32,00,000 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು, ಸಾಲ 1.5 ಲಕ್ಷ ಕೋಟಿ ರೂ.ಗಳನ್ನು ಮೀರುತ್ತದೆ. 2024-25 ರ ಅಂತ್ಯದ ವೇಳೆಗೆ ರಾಜ್ಯದ ಬಾಕಿ ಇರುವ ಹೊಣೆಗಾರಿಕೆಗಳು ಒಟ್ಟು ದೇಶಿಯ ಉತ್ಪನ್ನದ ಶೇಕಡಾ 24 ರಷ್ಟಿದೆ ಎಂದು ಅಂದಾಜಿಸಲಾಗಿದೆ, ಅಂದರೆ ಸಾಲವು 6.65 ಲಕ್ಷ ಕೋಟಿ ರೂ.ಗಳಷ್ಟಿದೆ. ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಕಾಯ್ದೆ ಪ್ರಕಾರ ರಾಜ್ಯವು ತನ್ನ GSDP ಯ ಶೇಕಡಾ 25 ರವರೆಗೆ ಸಾಲ ಪಡೆಯಬಹುದು.
ಈ ಬಾರಿ, ವಿವಿಧ ಪ್ರದೇಶಗಳಿಗೆ, ವಿಶೇಷವಾಗಿ ಕಲ್ಯಾಣ ಕರ್ನಾಟಕಕ್ಕೆ ಹಣವನ್ನು ಹಂಚಿಕೆ ಮಾಡುವ ಮೂಲಕ ಪ್ರಾದೇಶಿಕ ಸಮತೋಲನ ಸರಿದೂಗಿಸುವುದು ಮುಖ್ಯಮಂತ್ರಿಯ ಮುಂದಿರುವ ಸವಾಲಾಗಿದೆ. ಎಸ್ಸಿ/ಎಸ್ಟಿಗಳ ಕಲ್ಯಾಣಕ್ಕಾಗಿ ಮೀಸಲಾದ ಎಸ್ಸಿಪಿ/ಟಿಎಸ್ಪಿ ಅನುದಾನಗಳನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸದಂತೆ ನೋಡಿಕೊಳ್ಳುವುದು ಮತ್ತೊಂದು ದೊಡ್ಡ ಸವಾಲಾಗಿದೆ.