newsics.com
ಬೆಂಗಳೂರು: ಮೀನುಗಾರರ ಬೇಡಿಕೆ ಈಡೇರಿಸಿ ಮೀನುಗಾರಿಕೆ ಕ್ಷೇತ್ರದ ಹಿತ ಕಾಯುವಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ 16ನೇ ಬಜೆಟ್ ವಿಫಲವಾಗಿದೆ ಎಂದು ರಾಷ್ಟೀಯ ಮೀನುಗಾರರ ಸಂಘದ ಉಪಾಧ್ಯಕ್ಷ ಡಾ. ಗೌತಮ್ ಆರ್. ಚೌಧರಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಮೀನುಗಾರರ ಕಾಲೇಜುಗಳ ಸಂಖ್ಯೆ ಹೆಚ್ಚಿಸುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ 3 ಲಕ್ಷ ರೂಪಾಯಿಗಳವರೆಗೆ 4 ಚಕ್ರದ ವಾಹನ ಖರೀದಿಸಲು ಆರ್ಥಿಕ ನೆರವು ನೀಡಿದ್ದಾರೆ. 15 ವರ್ಷಕ್ಕಿಂತ ಹಳೆಯ ದೋಣಿಗಳಿಗೆ ಹೊಸ ಎಂಜಿನ್ ಅಳವಡಿಸಲು 1 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುವುದಾಗಿ ಘೋಷಿಸಿದ್ದಾರೆ.
ಆದರೆ, ಮೈಸೂರಿನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಆಧುನಿಕ ಪ್ರದರ್ಶನ ಕೇಂದ್ರ ಸ್ಥಾಪನೆ ಮತ್ತು ಮಲ್ಪೆಯಲ್ಲಿ ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ ಹೊರತುಪಡಿಸಿ, ಮೀನುಗಾರರ ಮೂಲ ಸೌಕರ್ಯ, ಸುರಕ್ಷತೆ ಮತ್ತು ಅವರ ಜೀವನೋಪಾಯಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಪೂರೈಸುವಲ್ಲಿ ಈ ಬಜೆಟ್ ವಿಫಲವಾಗಿದೆ. ಇದು ಒಟ್ಟಾರೆಯಾಗಿ ಮೀನುಗಾರ ಸಮುದಾಯಕ್ಕೆ ನಿರಾಶೆ ತಂದಿದೆ ಎಂದು ಗೌತಮ್ ಚೌಧರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.