newsics.com
ಗದಗ: ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾಳಮಂಜಿ ವೆಂಕಟಗಿರುಯಪ್ಪ ಶ್ರೀನಿವಾಸ್ (ಕಾವೆಂಶ್ರೀ) ಸೋಮವಾರ ನಿಧನರಾದರು.
ಆರೋಗ್ಯ ಸಮಸ್ಯೆಯಿಂದಾಗಿ ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ (ಮಾ.10) ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕಾವೆಂಶ್ರೀ ಕೊನೆಯುಸಿರೆಳೆದರು.
2023ರಲ್ಲಿ ನಡೆದಿದ್ದ 96ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಕಾವೆಂಶ್ರೀ ಅವರ ಕಾರ್ಯವನ್ನು ಪ್ರಶಂಸಿದ್ದರು.
ಕಾವೆಂಶ್ರೀ ಅವರ 25 ವರ್ಷಗಳ ಕಲಾ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದರು.
ಕಲೆ, ಸಂಸ್ಕೃತಿ ಉಳಿವಿಗಾಗಿ ಕಾವೆಂಶ್ರೀ ಅವರು 1996 ರಲ್ಲಿ ಕಲಾ ಚೇತನ ಸಂಸ್ಥೆ ಸ್ಥಾಪಿಸಿದರು. ಕಲಾ ಚೇತನ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಕಲಾವಿದರ ಕಾರ್ಯಕ್ರಮ ಆಯೋಜಿಸುತ್ತಿದ್ದರು. ನಿರಂತರ ಕಾರ್ಯಕ್ರಮ ಆಯೋಜನೆ ಬಗ್ಗೆ ಪ್ರಧಾನಿ ಮೋದಿಯವರು ಸಂತಸ ವ್ಯಕ್ತಪಡಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಕಾಳಮಂಜಿ ಮೂಲದ ಕಾವೆಂ ಶ್ರೀನಿವಾಸ್ ಅವರುಗದಗ ನಗರದಲ್ಲಿ ಕಳೆದ 34 ವರ್ಷದಿಂದ ವಾಸವಾಗಿದ್ದರು. ಕಲೆ, ಸಾಹಿತ್ಯ ಆಸಕ್ತಿ ಬೆಳೆಸಿಕೊಂಡಿದ್ದ ಶ್ರೀನಿವಾಸ್ ಅವರು ಅನೇಕ ಪತ್ರಿಕೆಗಳಲ್ಲಿ ಕಲೆ, ಸಾಹಿತ್ಯದ ಬಗ್ಗೆ ಲೇಖನ ಬರೆದಿದ್ದರು. ಕಾವೆಂಶ್ರೀ ಅವರು ಹೋಟೆಲ್ ಉದ್ಯಮದ ಜೊತೆಗೆ ಕಲಾ ಸೇವೆಯಲ್ಲೂ ತೊಡಗಿದ್ದರು.
ಸೋನಿಯಾ ಗಾಂಧಿ ಭಾವಚಿತ್ರ ಅಶ್ಲೀಲವಾಗಿ ಚಿತ್ರಿಸಿ ಪೋಸ್ಟ್ : ‘FIR’ ದಾಖಲು
ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಬಲವಂತವಾಗಿ 7 ನೇ ತರಗತಿ ಓದುತ್ತಿದ್ದ ಬಾಲಕಿಗೆ ‘ಬಾಲ್ಯ ವಿವಾಹ’ ಮಾಡಿಸಿದ ಪೋಷಕರು