newsics.com
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ನಟಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ.
ನಟಿ ರನ್ಯಾ ರಾವ್ ಬೆಂಗಳೂರಿನ ನಿವಾಸದ ಮೇಲೆ ನಿನ್ನೆ ಸಂಜೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ 5ನೇ ಕ್ರಾಸ್ ನಲ್ಲಿರುವ ನಂದವಾಣಿ ಮ್ಯಾನ್ಶನ್ನ ರನ್ಯಾ ರಾವ್ ಅವರ ಫ್ಲ್ಯಾಟ್ ಗೆ ಆಗಮಿಸಿದ್ದ ಇಬ್ಬರು ಸಿಬಿಐ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿ ತೆರಳಿದ್ದಾರೆ.
ಇಬ್ಬರು ಅಧಿಕಾರಿಗಳು ನಿನ್ನೆ ಸಂಜೆ 4ರಿಂದ 5 ಗಂಟೆಯವರೆಗೆ ಒಂದು ಗಂಟೆ ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Ranya gold smuggling case ರನ್ಯಾ ಚಿನ್ನ ಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ