Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Women’s Premier League ಮುಂಬೈ ಇಂಡಿಯನ್ಸ್‌ WPL ಚಾಂಪಿಯನ್
ದೇಶಪ್ರಮುಖ

Women’s Premier League ಮುಂಬೈ ಇಂಡಿಯನ್ಸ್‌ WPL ಚಾಂಪಿಯನ್

Share
3 Min Read
SHARE

newsics.com

ಮುಂಬೈನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) ಮೂರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಮೂರನೇ ಬಾರಿಗೆ ಫೈನಲ್ನಲ್ಲಿ ಸೋತು ಚಾಂಪಿಯನ್ ಪಟ್ಟದಿಂದ ವಂಚಿತವಾಯಿತು.
ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಅರ್ಧಶತಕ ಹಾಗೂ ನ್ಯಾಟ್ ಸಿವರ್ ಬ್ರಂಟ್ ಅವರೊಂದಿಗೆ ಅರ್ಧಶತಕದ ಜೊತೆಯಾಟದಿಂದ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು.

ಈ ಫೈನಲ್ ಪಂದ್ಯದಲ್ಲಿ ಈ ಇಬ್ಬರನ್ನು ಬಿಟ್ಟರೆ ಮುಂಬೈ ಬ್ಯಾಟರ್‌ಗಳ ಪ್ರದರ್ಶನ ನಿರಾಶಾದಾಯಕವಾಗಿತ್ತು. ನ್ಯಾಟ್ ಸಿವರ್ ಬ್ರಂಟ್ ಮತ್ತು ಹರ್ಮನ್‌ಪ್ರೀತ್ ಕೌರ್ ಹೊರತುಪಡಿಸಿ, ಉಳಿದ ಬ್ಯಾಟರ್ಗಳಿಗೆ ಡೆಲ್ಲಿ ತಂಡದ ಮಾರಕ ಬೌಲಿಂಗ್ ಮುಂದೆ ಉತ್ತಮ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ

.

ತಂಡವು 14 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಹೇಲಿ ಮ್ಯಾಥ್ಯೂಸ್ (3) ಮತ್ತು ಯಸ್ತಿಕಾ ಭಾಟಿಯಾ (8) ವಿಕೆಟ್‌ಗಳನ್ನು ಮರಿಜಾನ್ನೆ ಕಪ್ ಪಡೆದರು. ಇದಾದ ನಂತರ, ಬ್ರಂಟ್ ಮತ್ತು ನಾಯಕಿ ಕೌರ್ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡರು. ಇವರಿಬ್ಬರ ನಡುವೆ 62 ಎಸೆತಗಳಲ್ಲಿ 89 ರನ್‌ಗಳ ಪಾಲುದಾರಿಕೆ ಇತ್ತು. ಈ ವೇಳೆ ನ್ಯಾಟ್ ಸಿವರ್ ಬ್ರಂಟ್ 30 ರನ್ ಗಳಿಸಿ ಔಟಾದರೆ, ಹರ್ಮನ್ಪ್ರೀತ್ 44 ಎಸೆತಗಳಲ್ಲಿ 66 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ಅಮೇಲಿಯಾ ಕರ್, ಜಿ ಕಮಲಿನಿ 10, ಅಮನ್‌ಜೋತ್ ಕೌರ್ 14* ಮತ್ತು ಸಂಸ್ಕೃತಿ ಗುಪ್ತಾ 8* ರನ್ ಗಳಿಸಿದರೆ, ಸಜೀವನ್ ಸಜ್ನಾಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಇತ್ತ ದೆಹಲಿ ಪರ ಮರಿಜ್ನ್ ಕಾಪ್, ಜೆಸ್ ಜೊನಾಸನ್ ಮತ್ತು ಶ್ರೀ ಚರಣಿ ತಲಾ ಎರಡು ವಿಕೆಟ್ ಪಡೆದರೆ, ಅನ್ನಾಬೆಲ್ ಸದರ್ಲ್ಯಾಂಡ್ ಒಂದು ವಿಕೆಟ್ ಪಡೆದರು.

ಮುಂಬೈ ನೀಡಿದ 150 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತೊಮ್ಮೆ ಫೈನಲ್ ನರ್ವಸ್ಗೆ ಬಲಿಯಾಯಿತು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನೇ ಹೊಂದಿರುವ ಡೆಲ್ಲಿಗೆ 150 ರನ್ ಹೊಡೆಯಲು ಸಾಧ್ಯವಾಗಲಿಲ್ಲ. ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ತಂಡ ಕೇವಲ 44 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.

ನಾಯಕಿ ಮೆಗ್ ಲ್ಯಾನಿಂಗ್ 13 ರನ್ ಗಳಿಸಿ ಔಟಾದರೆ, ಶೆಫಾಲಿ ವರ್ಮಾ ಕೇವಲ ನಾಲ್ಕು ರನ್ ಗಳಿಸಿ ಔಟಾದರು. ನಂತರ ಜೆಸ್ ಜೊನಾಸನ್ ಕೂಡ ಕೇವಲ 13 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ದೆಹಲಿ ಪರ ಮರಿಜೆನ್ ಕಾಪ್ 40 ರನ್ ಗಳಿಸಿ ಅತ್ಯಧಿಕ ಇನ್ನಿಂಗ್ಸ್ ಆಡಿದರಾದರೂ ಅವರಿಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಅವರಲ್ಲದೆ, ಜೆಮಿಮಾ ರೊಡ್ರಿಗಸ್ 30 ರನ್ ಬಾರಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಕೈಚೆಲ್ಲಿದರು. ಎಂದಿನಂತೆ ಕೈಕೊಟ್ಟ ಮಧ್ಯಮ ಕ್ರಮಾಂಕ ತಂಡವನ್ನ ಸಂಕಷ್ಟಕ್ಕೆ ಸಿಲುಕಿಸಿತು.

ಆದರೆ ಕೊನೆಯಲ್ಲಿ ಕನ್ನಡತಿ ನಿಕ್ಕಿ ಪ್ರಸಾದ್ 25 ರನ್ ಬಾರಿಸಿ ಹೋರಾಟ ಕೊಟ್ಟರಾದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಇತ್ತ ಮುಂಬೈ ಪರ ನ್ಯಾಟ್ ಸಿವರ್ ಬ್ರಂಟ್ ಮೂರು ವಿಕೆಟ್ ಪಡೆದರೆ, ಅಮೇಲಿಯಾ ಕಾರ್ ಎರಡು ವಿಕೆಟ್ ಪಡೆದರು. ಉಳಿದಂತೆ, ಶಬ್ನಮ್ ಇಸ್ಮಾಯಿಲ್, ಹೇಲಿ ಮ್ಯಾಥ್ಯೂಸ್ ಮತ್ತು ಸೈಕಾ ಇಶಾಕ್ ತಲಾ ಒಂದು ವಿಕೆಟ್ ಪಡೆದರು.

https://x.com/wplt20/status/1900970055955083738?t=wKItOxRt2Q-GiWBqhx7INQ&s=19

Naga Chaitanya ರೇಸ್ ಟ್ರ್ಯಾಕ್ ಅಂದ್ರೆ ಶೋಭಿತಾಗೂ ಸಖತ್ ಇಷ್ಟ ಎಂದ ನಾಗ ಚೈತನ್ಯ

ನಿಮ್ಮ ಫೋನ್ ಹ್ಯಾಕ್ ಆಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

TAGGED:Mumbai Indians are WPL champions
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಕುಡುಕರ ಹೊಡೆದಾಟ: ಮೂವರ ಸಾವು, ಓರ್ವನ‌ ಬಂಧನ
Next Article A.R. Rahman hospitalized ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?