newsics.com
ನವದೆಹಲಿ: ಡೊನಾಲ್ಡ್ ಟ್ರಂಪ್ 2022ರಲ್ಲಿ ಪ್ರಾರಂಭಿಸಿದ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರುತ್ ಸೋಶಿಯಲ್’ಗೆ ನರೇಂದ್ರ ಮೋದಿ ಅಧಿಕೃತವಾಗಿ ಸೇರಿದ್ದಾರೆ.
ಈ ಕ್ರಮವು ಜಾಗತಿಕ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳೊಂದಿಗೆ ಮೋದಿಯವರ ಜನಪ್ರಿಯತೆಗೆ ಮತ್ತೊಂದು ಉದಾಹರಣೆಯಾಗಿದೆ. ಲೆಕ್ಸ್ ಫ್ರಿಡ್‌ಮನ್ (Lex Friedman) ಅವರೊಂದಿಗಿನ ಪಾಡ್‌ಕ್ಯಾಸ್ಟ್‌ನ ಪ್ರಸಾರವಾದ ಮರುದಿನ ಅಂತಾರಾಷ್ಟ್ರೀಯ ಪ್ರೇಕ್ಷಕರಲ್ಲಿ ಮೋದಿ ಬಗ್ಗೆ ಇದ್ದ ಕುತೂಹಲ ಹೆಚ್ಚಿದ್ದು, ಇದೀಗ ತಮ್ಮ ನೆಚ್ಚಿನ ಗೆಳೆಯ ಮೋದಿಯವರನ್ನು ತಮ್ಮ ಸೋಶಿಯಲ್ ಮೀಡಿಯಾ ವೇದಿಕೆಯಲ್ಲಿ ಟ್ರಂಪ್ ಸೇರಿಸಿಕೊಂಡಿದ್ದಾರೆ.
ಈಗಾಗಲೇ ಟ್ರುತ್ ಸೋಶಿಯಲ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ. ತಮ್ಮ ಮೊದಲ ಟ್ರುತ್‌ನಲ್ಲಿ ಪ್ರಧಾನಿ ಮೋದಿ ಅವರು “ತಮ್ಮ ಆತ್ಮೀಯ ಸ್ನೇಹಿತ” ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. “ಟ್ರುತ್ ಸೋಶಿಯಲ್‌ನಲ್ಲಿರುವುದಕ್ಕೆ ಸಂತೋಷವಾಗಿದೆ! ಇಲ್ಲಿರುವ ಎಲ್ಲಾ ವ್ಯಕ್ತಿಗಳೊಂದಿಗೆ ಸಂವಹನ ನಡೆಸಲು ಮತ್ತು ಮುಂಬರುವ ದಿನಗಳಲ್ಲಿ ಅರ್ಥಪೂರ್ಣ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ತಮ್ಮ ಮೊದಲ ಪೋಸ್ಟ್‌ನಲ್ಲಿ ಬರೆದಿದ್ದಾರೆ.