newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿತ್ತು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಕೂಡ ಸಲ್ಲಿಸಿತ್ತು. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದ ಕನಸನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಂಡಿದ್ದರು. ಆದರೆ, ಇದೀಗ ಕೇಂದ್ರ, ಕರ್ನಾಟಕ ಸರ್ಕಾರದ ನಿರ್ಧಾರವನ್ನು ತಿಸ್ಕರಿಸಿದ್ದರಿಂದ ಡಿಕೆ ಶಿವಕುಮಾರ್ ಅವರ ಕನಸು ಭಗ್ನವಾಗಿದೆ.
ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣದ ಕಿಡಿ ಹೊತ್ತಿಸಿದ್ದರು. ಇದು, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿತ್ತು