newsics.com
ಬೆಂಗಳೂರು : ಅಶಿಸ್ತಿನ ವರ್ತನೆಯ ಹಿನ್ನಲೆಯಲ್ಲಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಆರು ತಿಂಗಳುಗಳ ಕಾಲ ಅಮಾನತ್ತು ಮಾಡಿದ್ದಾರೆ.
ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತ್ರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲಿಂ ಮೀಸಲಾತಿ ಮಸೂದೆ ಸೇರಿದಂತೆ ವಿವಿಧ ಮಸೂದೆ ವಿರೋಧಿಸಿ ಬಿಜೆಪಿಯ ಶಾಸಕರು ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.
ವಿಧಾನಸಭೆಯ ಕಲಾಪದ ವೇಳೆ ಸ್ಪೀಕರ್ ಯುಟಿ ಖಾದರ್ ಅವರ ಪೀಠದ ಎದುರು ಬಜೆಟ್ನ ಪ್ರತಿ ಹರಿದು ಹಾಕುವ ಮೂಲಕ ಸದನದ ಕಲಾಪಕ್ಕೆ ಅಡ್ಡಿ ಮಾಡಿದ್ದು ಹಾಗೂ ಬೇಜವಾಬ್ದಾರಿಯಿಂದ ನಡೆದುಕೊಂಡ ಆರೋಪದಡಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಖಾದರ್ ಅವರು ಆದೇಶಿಸಿದ್ದಾರೆ.
ಬಿಜೆಪಿಯ ದೊಡ್ಡಮಗೌಡ ಪಾಟೀಲ್, ಅಶ್ವತ್ಥನಾರಾಯಣ, ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಬಿಪಿ ಹರೀಶ್, ಧೀರಜ್ ಮುನಿರಾಜ್, ಶರಣು ಸಲಗರ, ಬಿ ಸುರೇಶ್ ಗೌಡ, ಮುನಿರತ್ನ, ಚನ್ನಬಸವ ಸೇರಿದಂತೆ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.