Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC EXAM ಇಂದಿನಿಂದ SSLC ಪರೀಕ್ಷೆಗಳು ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ
ಕರ್ನಾಟಕಪ್ರಮುಖ

SSLC EXAM ಇಂದಿನಿಂದ SSLC ಪರೀಕ್ಷೆಗಳು ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ

Share
1 Min Read
SHARE

newsics.com

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ಏ.4ರವರೆಗೆ ನಡೆಯುವ ಪರೀಕ್ಷೆಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷೆಗೆ 8.42 ಲಕ್ಷ ತರಗತಿ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಏನೇನು ಮಾಡ್ಬೇಕು?: ಬೆಳಗ್ಗೆ 10ಕ್ಕೆ ಪರೀಕ್ಷೆ ಆರಂಭವಾಗುವುದರಿಂದ 9 ಗಂಟೆಯೊಳಗೆ ಪರೀಕ್ಷಾ ಕೇಂದ್ರ ತಲುಪಿ ತಮ್ಮ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿ ದಾಖಲಿಸಲಾಗಿದೆ ಎನ್ನುವುದನ್ನು ಕೇಂದ್ರದ ಆವರಣದಲ್ಲಿ ಪ್ರಕಟಿಸಿರುವ ಫಲಕ ನೋಡಿಕೊಳ್ಳಿ. ಮನೆಯಿಂದ ಹೊರಡುವಾಗ ತಪ್ಪದೆ ಹಾಲ್‌ ಟಿಕೆಟ್‌, ನೀಲಿ ಬಾಲ್‌ ಪಾಯಿಂಟ್‌ನ ಎರಡ್ಮೂರು ಪೆನ್ನುಗಳನ್ನು ತೆಗೆದುಕೊಂಡು ಹೋಗಿ. ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಕೊಂಡೊಯ್ಯಬೇಡಿ. ಉತ್ತರ ಪತ್ರಿಕೆಯಲ್ಲಿ ನೋಂದಣಿ ಸಂಖ್ಯೆ ದಾಖಲಿಸುವುದನ್ನು ವಿದ್ಯಾರ್ಥಿಗಳು ಮರೆಯಬಾರದು.

ಪರೀಕ್ಷಾ ಕೇಂದ್ರ, ಸುತ್ತಮುತ್ತ ಬಿಗಿ ಭದ್ರತೆ

ಎಲ್ಲೆಡೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ, ಮುಂಜಾಗ್ರತಾ ಕ್ರಮ ಹಾಗೂ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. 2,818 ಸ್ಥಾನಿಕ ದಳ, ಜಿಲ್ಲಾ ಹಂತದಲ್ಲಿ 400, ತಾಲೂಕು ಹಂತದಲ್ಲಿ 1,662 ವಿಚಕ್ಷಣ ದಳವನ್ನು ಪರೀಕ್ಷಾ ಭದ್ರತೆ ದೃಷ್ಟಿಯಿಂದ ನೇಮಿಸಲಾಗಿದೆ. ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರಲಿದ್ದು ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಸೇರಿ ಉನ್ನತ ಅಧಿಕಾರಿಗಳು ಜಿಲ್ಲಾ ನಿಯಂತ್ರಣ ಕೊಠಡಲ್ಲೇ ಕೂತು ತಮ್ಮ ಜಿಲ್ಲಾ ವ್ಯಾಪ್ತಿಯ ಕೇಂದ್ರಗಳ ಪ್ರತಿ ಕೊಠಡಿಯ ಚಿತ್ರಣ ವೀಕ್ಷಣೆ ಮಾಡುತ್ತಿರುತ್ತಾರೆ. ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್, ಸೈಬರ್, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವಂತಿಲ್ಲ.

ಮುಖ್ಯಮಂತ್ರಿಯವರೂ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ 2023-24ರಲ್ಲಿ ಇದ್ದಂತೆ ಶೇ.10ರಷ್ಟು ಗ್ರೇಸ್‌ ಅಂಕ ಮಾತ್ರ ನೀಡಲು ತೀರ್ಮಾನಿಸಲಾಗಿದೆ.

TAGGED:SSLC exams begin from today: Web streaming system to prevent irregularities
Share This Article
Facebook Twitter Copy Link Print
Previous Article Karnataka Rains: ಇಂದಿನಿಂದ ಸತತ ಒಂದು ವಾರ ಮಳೆ ಮುನ್ಸೂಚನೆ
Next Article Today’s almanac ಫಾಲ್ಗುಣ ಮಾಸ ಕೃಷ್ಣ ಪಕ್ಷ ಸಪ್ತಮಿ, 21-03-2025, ಶುಕ್ರವಾರ, ಶಬರಿ ಜಯಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?