newsics.com
ದಕ್ಷಿಣ ಕನ್ನಡ: ನಾಲ್ಕು ತಿಂಗಳ ಹಸುಗೂಸನ್ನು ಕಾಡಿನ ಮಧ್ಯದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಕೊಡೋಳುಕೆರೆ ಬಳಿ ನಡೆದಿದೆ.
ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ಕೇಳಿ ದಾರಿಹೋಕ ಮಹಿಳೆಗೆ ಆಶ್ಚರ್ಯವಾಗಿದೆ.ಈ ಕೊಡಲೇ ಆ ಮಹಿಳೆ ಮಗುವನ್ನು ಕಂಡಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ
ಸದ್ಯ ಈ ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದ್ದು, ಮಗು ದೊರೆತ ಸ್ಥಳದಲ್ಲಿ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದು ಜೊತೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳಿಗೆ ಮಗುವನ್ನು ಒಪ್ಪಿಸಿದ್ದು ತನಿಖೆ ಮುಂದುವರೆಸಿದ್ದಾರೆ.