ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಶಾಲಾ ವಿದ್ಯಾರ್ಥಿಗಳಿಗೆ ಹೊಸ ಕಾರ್ಯಕ್ರಮ ಆಯೋಜಿಸಿದೆ. ಈ
ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ.
ಹೌದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶಾಲಾ ವಿದ್ಯಾರ್ಥಿಗಳಿಗೆ ‘ಯುವ ವಿಜ್ಞಾನಿ ಕಾರ್ಯಕ್ರಮ’ ಆರಂಭಿಸಿದೆ. ಈ ವಿಶೇಷ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು/ಪೋಷಕರು ಅಧಿಕೃತ ವೆಬ್‌ಸೈಟ್ jigyasa.iirs.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಇಸ್ರೋ ಹೊರಡಿಸಿದ ಅಧಿಸೂಚನೆಯ ಪ್ರಕಾರ, ‘ಯುವ ವಿಜ್ಞಾನಿ ಕಾರ್ಯಕ್ರಮ’ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್ 7 ರಂದು ಬಿಡುಗಡೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಮೇ 19 ರೊಳಗೆ ಅಥವಾ ನೋಂದಾಯಿತ ಇಮೇಲ್ ವಿಳಾಸದಲ್ಲಿ ಉಲ್ಲೇಖಿಸಲಾದ ದಿನಾಂಕದೊಳಗೆ ಆಯಾ ಇಸ್ರೋ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಈ ಕಾರ್ಯಕ್ರಮವು ಮೇ 19 ರಂದು ಪ್ರಾರಂಭವಾಗಿ ಮೇ 30 ರವರೆಗೆ ನಡೆಯಲಿದೆ ಎಂದು ತಿಳಿಸಿದೆ.