newsics.com
ರಾಯಚೂರು: ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ.
ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ 100 ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ. ವೈರಸ್ ಸೋಂಕು ತಗುಲಿದಲ್ಲಿ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಸೋಂಕು ತಗುಲಿದೆ 100 ಬೆಕ್ಕುಗಳಲ್ಲಿ 99 ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಜಿಲ್ಲೆಯ ಬೆಕ್ಕುಗಳಿಗೆ ಮಾರಣಾಂತಿಕ ಎಫ್ಪಿವಿ ವೈರಸ್ ದೃಢಪಟ್ಟಿದೆ. 100 ಕ್ಕೂ ಬೆಕ್ಕುಗಳು ಹೊಸ ವೈರಸ್ ಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಕೊರೊನಾ ವೈರಸ್ ರೀತಿ ಎಫ್ಪಿವಿ ವೈರಾಣು ಸೋಂಕಿಗೂ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ರಾಯಚೂರಿನಲ್ಲಿ ಸದ್ಯ 150 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 100 ಕ್ಕೂ ಹೆಚ್ಚು ಬೆಕ್ಕುಗಳು ಚಿಕಿತ್ಸೆ ಫಲಕಾರಿಯಾಗದೇ ಈಗಾಗಲೇ ಮೃತಪಟ್ಟಿವೆ. ಬೀದಿ ಬೆಕ್ಕುಗಳು, ಸಾಕು ಬೆಕ್ಕುಗಳಲ್ಲಿ ವೈರಸ್ ಪತ್ತೆಯಾಗಿದೆ.
ಎಫ್ಪಿವಿ ವೈರಸ್ ತಗುಲಿದರೆ ಮೂರು ಹಂತದಲ್ಲಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮೊದಲ ಹಂತದಲ್ಲಿ ವಾಂತಿ, ಬೇಧಿ, ನಿರ್ಜಲೀಕರಣ ಉಂಟಾಗುತ್ತದೆ. ಎರಡನೆ ಹಂತದಲ್ಲಿ ಹೆಚ್ಚಿನ ತಾಪದೊಂದಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಮೂರನೇ ಹಂತದಲ್ಲಿ ನಿಶ್ಯಕ್ತಿ, ಖಿನ್ನತೆ ಉಂಟಾಗುತ್ತದೆ.
Warning: ಈ ಆ್ಯಪ್ಗಳು ನಿಮ್ಮ ಮೊಬೈಲ್ನಲ್ಲಿದ್ರೆ ಇಂದೇ ಡಿಲೀಟ್ ಮಾಡಿ! ಕೇಂದ್ರ ಎಚ್ಚರಿಕೆ