newsics.com
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಸಚಿವರು ಸೇರಿದಂತೆ ಪ್ರಮುಖ ನಾಯಕರ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆರೋಪ ಮಾಡಿದ್ದರು. ಈ ಪ್ರಕರಣದ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಯಲಿದೆ.
ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಂನಾಥ್, ನ್ಯಾ. ಸಂಜಯ್ ಕರೋಲ್, ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಪ್ರಕರಣದಲ್ಲಿ ಸಚಿವರು ಮಾತ್ರವಲ್ಲದೇ ನ್ಯಾಯಮೂರ್ತಿ ಹೆಸರಿರುವುದನ್ನು ಅರ್ಜಿದಾರರು ಪತ್ತೆಹಚ್ಚಿದ್ದಾರೆ. ಇದೊಂದು ಗಂಭೀರ, ಆಘಾತಕಾರಿ ವಿಷಯ. ವ್ಯಕ್ತಿಗಳ ವೈಯುಕ್ತಿಕ ಗೌರವವನ್ನ ಉಳಿಸಬೇಕು. ಇದೊಂದು ದೊಡ್ಡ ಹಗರಣವಾಗಿರುವ ಸಾಧ್ಯತೆ ಇರುವುದರಿಂದ ಕೂಲಂಕಷ ತನಿಖೆಯಾದರೆ ಎಲ್ಲ ಸತ್ಯಾಸತ್ಯತೆ ಹೊರಬರಲಿದೆ” ಎಂದು ನ್ಯಾಯಾಲಯದಲ್ಲಿ ಅರ್ಜಿದಾರರು ಮನವಿ ಸಲ್ಲಿಸಿದ್ದರು. ಸದ್ಯ ಅರ್ಜಿ ಪರಿಶೀಲನೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
48 ಜನರಿಗೆ ಹನಿಟ್ರ್ಯಾಪ್?
ರಾಜ್ಯದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ್ಯಾಪ್ ಪ್ರಕರಣ ನಡೆದಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿದ್ದು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠಕ್ಕೆ ಅರ್ಜಿ ಸಲ್ಲಿಸಲಾಗಿದೆ. ನಾಳೆ ಅಥವಾ ನಾಡಿದ್ದು ವಿಚಾರಣೆ ನಡೆಯುವ ಸಾಧ್ಯತೆಯಿದೆ.
Geetha Shivarajkumar ಶಿವಣ್ಣ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು, 2 ಸರ್ಜರಿ, ಅವರಿಗೇನಾಯ್ತು?