newsics.com
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ, ಹೈಕಮಾಂಡ್ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ, ಎದುರಾಳಿ ಪಕ್ಷದ ನಾಯಕನ ಭೇಟಿ ಮಾಡಿದ್ದಾರೆ.
ಪ್ರಧಾನಿ ಎಚ್. ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಕಳೆದ ಎರಡು ದಿನಗಳಿಂದ ದಿಲ್ಲಿಯಲ್ಲೇ ಠಿಕಾಣಿ ಹೂಡಿರುವ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿಯಾಗಿದ್ದರು. ದಿಢೀರನೇ ಬುಧವಾರ ಸಂಸತ್ ಭವನದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಆರಂಭದಲ್ಲಿ ದೇವೇಗೌಡ ಅವರೊಂದಿಗೆ ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದರು. ಆ ಬಳಿಕ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿರುವುದು ಅಚ್ಚರಿ ಮೂಡಿಸಿದೆ.