newsics.com
ಬೆಂಗಳೂರು: ನಿರಂತರ ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬಿದ್ದಾಗಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲು ಹಾಲು ಒಕ್ಕೂಟಗಳ ಮನವಿಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ಲೀಟರ್ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಹಾಲಿನ ದರ ಏರಿಕೆ ಶಾಕ್ ಕೊಟ್ಟಿದೆ.
ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಯನ್ನು ಸೂಚಿಸಿದೆ.