newsics.com
ನವದೆಹಲಿ: ಈ ವರ್ಷದಿಂದಲೇ ಚಾರ್ಟರ್ಡ್ ಅಕೌಂಟೆಂಟ್ (ಸಿ.ಎ.) ಕೋರ್ಸ್‌ನ ಅಂತಿಮ ಪರೀಕ್ಷೆ 3 ಬಾರಿ ನಡೆಯಲಿದೆ. ಈ ಬಗ್ಗೆ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಹೇಳಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವೂ ಲಭಿಸಲಿದೆ ಎಂದು ಐಸಿಎಐ ಹೇಳಿದೆ.
ಸದ್ಯ, ಈ ಪರೀಕ್ಷೆಗಳನ್ನು ವರ್ಷದಲ್ಲಿ ಎರಡು ಬಾರಿ ನಡೆಸಲಾಗುತ್ತಿತ್ತು. ‘ಲೆಕ್ಕ ಪರಿಶೋಧನೆ ಕ್ಷೇತ್ರದಲ್ಲಿ ಜಾಗತಿಕವಾಗಿ ಅನುಸರಿಸಲಾಗುತ್ತಿರುವ ವಿಧಾನಗಳ ಅಳವಡಿಕೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಐಸಿಎಐ ತಿಳಿಸಿದೆ