newsics.com
ಬೆಂಗಳೂರು: ರಾಜ್ಯದಲ್ಲಿ ಪೂರೈಕೆಯಾಗುತ್ತಿರುವ ಕುಡಿಯುವ ಮಿನರಲ್ ವಾಟರ್ ಬಾಟಲ್‌ಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿರುವುದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ವರದಿಯಿಂದ ತಿಳಿದುಬಂದಿದೆ.
ಇತ್ತೀಚೆಗೆ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಸುಮಾರು 160 ಮಿನರಲ್ ವಾಟರ್ ಬಾಟಲ್‌ಗಳನ್ನ ಸ್ಯಾಂಪಲ್ ಟೆಸ್ಟ್‌ಗೆ ಕಳುಹಿಸಿತ್ತು. ಈ ಪೈಕಿ ಈಗಾಗಲೇ 100ಕ್ಕೂ ಹೆಚ್ಚು ಬಾಟಲ್‌ಗಳ ವರದಿ ಕೈಸೇರಿದೆ. ಇಲಾಖೆ ಕಳುಹಿಸಿದ್ದ ಮಾದರಿಗಳಲ್ಲಿ 50% ನೀರು ಅನ್‌ಸೇಫ್ ಆಗಿದೆ. ಲೋಕಲ್ ಮಿನರಲ್ ವಾಟರ್ ಅನ್ ಸೇಫ್ ಅಂತ ರಿಪೋರ್ಟ್ ಬಂದಿರುವುದಾಗಿ ತಿಳಿದುಬಂದಿದೆ.
ಮಿನರಲ್ ವಾಟರ್ ಬಾಟಲ್ ವರದಿಯಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ತುಂಬಾ ಸಮಯದಿಂದ ನೀರು ಶೇಖರಣೆ ಮಾಡುವುದರಿಂದ ಪಾಚಿ ಅಂಶಗಳು ಕಂಡುಬಂದಿವೆ. ಅಲ್ಲದೇ ಕೆಲ ಕಂಪನಿಗಳು ಕಲುಷಿತ ನೀರು, ಬೋರ್ವೆಲ್ ನೀರನ್ನು ಬಾಟಲ್ ಮೂಲಕ ಮಾರಾಟ ಮಾಡುತ್ತಿದ್ದದ್ದು ಕಂಡುಬಂದಿದೆ.
ನೀರನ್ನು ಶುದ್ದೀಕರಿಸದೇ ನೇರವಾಗಿ ಮಾರುಕಟ್ಟೆಗೆ ಸರಬರಾಜು ಮಾಡುತ್ತಿದ್ದ ಕಾರಣ ಹಾನಿಕಾರಕ ಅಂಶ ಪತ್ತೆಯಾಗಿರುವುದು ಕಂಡುಬಂದಿದೆ. ಇಂತಹ ಕಲುಷಿತ ನೀರು ಕುಡಿಯೋದ್ರಿಂದ ವಾಂತಿ, ಭೇದಿ, ಜ್ವರ, ಸುಸ್ತು ಕಾಣಿಸಿಕೊಳ್ಳುತ್ತೆ, ಅದ್ರಲ್ಲೂ ಮಕ್ಕಳಿಗೆ ಬೇಗನೇ ಆರೋಗ್ಯದ ಸಮಸ್ಯೆ ಉಂಟಾಗುತ್ತದೆ ಎಂದು ಆಹಾರ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
Sangeeta Sringeri ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡ ಚಾರ್ಲಿ ನಟಿ ಸಂಗೀತಾ ಶೃಂಗೇರಿ