newsics.com
ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಕನ್ನಡ ಬಿಗ್‌ಬಾಸ್‌ನ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
24ನೇ ಎಸಿಜೆಎಂ ನ್ಯಾಯಾಲಯವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಸಾವಿರ ರೂಪಾಯಿ ಶೂರಿಟಿ ನೀಡುವ ಷರತ್ತನ್ನು ನ್ಯಾಯಾಲಯ ವಿಧಿಸಿದೆ.
ಮಾರ್ಚ್ 26 ರಂದು ಈ ಇಬ್ಬರು ಆರೋಪಿಗಳನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಲು ಕೋರ್ಟ್ ಆದೇಶಿಸಿತ್ತು. ಅಲ್ಲದೆ ಕಸ್ಟಡಿ ಅವಧಿ ಮುಗಿದ ಬಳಿಕ ಅಂದರೆ, ಮಾರ್ಚ್ 28ರಂದು ಸಂಜೆ 4 ಗಂಟೆಗೆ ಇಬ್ಬರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಸೂಚಿಸಿತ್ತು. ಅದರಂತೆ ಪೊಲೀಸರು ಇಂದು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು.