newsics.com
ಬೆಂಗಳೂರು: ಬಾಕಿ ಸಾಲವನ್ನು ವಸೂಲಿ ಮಾಡಲು ನಿವೃತ್ತ ಬ್ಯಾಂಕ್ ಉದ್ಯೋಗಿಗಳ ಪಿಂಚಣಿಯನ್ನು ಕಡಿತಗೊಳಿಸಬಾರದು ಎಂದು ಹೈಕೋರ್ಟ್ ಆದೇಶ ಆದೇಶಿಸಿದೆ.
ನಿವೃತ್ತ ಬ್ಯಾಂಕ್ ಉದ್ಯೋಗಿಗಳ ಪಿಂಚಣಿಯನ್ನು ಸಂಪೂರ್ಣವಾಗಿ ಸಾಲ ಮರುಪಾವತಿಗೆ ಬಳಸಿಕೊಳ್ಳಬಾರದು ಕೆನರಾ ಬ್ಯಾಂಕ್‌ಗೆ ಕರ್ನಾಟಕ ಹೈಕೋರ್ಟ್ ಒತ್ತಿ ಹೇಳಿದೆ.
ನಿವೃತ್ತರಿಗೆ ಪಿಂಚಣಿ ಆರ್ಥಿಕ ಭದ್ರತೆಯಾಗಿ ಕಾರ್ಯನಿರ್ವಹಿಸುತ್ತದೆ. ವಸೂಲಿ ಮಾಡಲು ಬ್ಯಾಂಕುಗಳು ಕಾನೂನುಬದ್ಧ ಹಕ್ಕನ್ನು ಹೊಂದಿದ್ದರೂ, ಪಿಂಚಣಿದಾರರ ಜೀವನೋಪಾಯವನ್ನು ರಕ್ಷಿಸುವ ನಿಯಮಗಳನ್ನು ಪಾಲಿಸಬೇಕು ಎಂದು ತೀರ್ಪು ನೀಡಿದ ನ್ಯಾಯಮೂರ್ತಿ ಎಸ್ ಜಿ ಪಂಡಿತ್ ಅವರು ಹೇಳಿದ್ದಾರೆ.