newsics.com
ತುಮಕೂರು : ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ಹಾಗೂ ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸಂಚು ನಡೆದಿತ್ತು ಎಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅನಾಮಧೇಯ ಮೂಲಗಳಿಂದ ಆಡಿಯೋ ಸಿಕ್ಕ ಹಾಗೂ ಆಡಿಯೋದಲ್ಲಿ ರಾಜೇಂದ್ರ ಸುಪಾರಿ ಬಗ್ಗೆ ನಡೆಸಿದ್ದ ಮಾತುಕತೆ ಮಾಹಿತಿ ಮೇರೆಗೆ ಸೋಮ, ಭರತ, ಅಮಿತ್, ಗುಂಡ, ಯತೀಶ್ ಕೊಲೆಗೆ ಸಂಚು ರೂಪಿಸಿರುವುದು ಬಹಿರಂಗವಾಗಿದ್ದು, ಈ ಸಂಬಂಧ ಈ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಸಿದ್ದಾರೆ.
ರಾಜೇಂದ್ರ ಅವರ ಮಗಳ ಜನ್ಮದಿನವೇ ಹತ್ಯೆಗೆ ಪ್ಲ್ಯಾನ್ ನಡೆದಿತ್ತು. ಆದ್ರೆ, ಸಮಯ ಸಂದರ್ಭ ಕಾರಣದಿಂದ ಕೃತ್ಯವೆಸಗಲಾಗಿರಲಿಲ್ಲ. ಮುಂದೊಂದು ದಿನ ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಇದಕ್ಕಾಗಿಯೇ ರಾಜೇಂದ್ರ ಹತ್ಯೆಗೆ ಹೊಸ ಕಾರು, ಶಸ್ತ್ರಾಸ್ತ್ರ ಖರೀದಿಸಿದ್ದರು. ಆರೋಪಿಗಳಾದ ಸೋಮ, ಭರತ, ಅಮಿತ್, ಗುಂಡ, ಯತೀಶ್ ಕೊಲೆಗೆ ಸಂಚು ರೂಪಿಸಿದ್ದು, 70 ಲಕ್ಷಕ್ಕೆ ಡೀಲ್ ಮಾಡಿಕೊಂಡು ಅದರಲ್ಲಿ 5 ಲಕ್ಷ ಮುಂಗಡವಾಗಿ ಪಡೆದಿದ್ದರು. ಮಧುಗಿರಿ, ತುಮಕೂರು, ಬೆಂಗಳೂರು, ಕಲಾಸಿಪಾಳ್ಯಗಳಲ್ಲಿ ಚಲನವಲನಗಳ ಬಗ್ಗೆ ಆಪ್ಡೇಟ್ ಮಾಡುತ್ತಿದ್ದ ಬಗ್ಗೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ತುಮಕೂರಿನ ಶಿರಾ ಗೇಟ್ ಶೆಡ್ನಲ್ಲಿ ಸ್ಕೆಚ್ ಹಾಕುತ್ತಿದ್ದರು. ಉನ್ನತಮಟ್ಟದ ರಾಜಕಾರಣಿಗಳ ಕೈವಾಡವಿರುವುದಾಗಿ ರಾಜೇಂದ್ರ ದೂರಿನಲ್ಲಿ ತಿಳಿಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಹಾಗೇ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.
Judge Cash Row: ನ್ಯಾ.ಯಶವಂತ್ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ