newsics.com
ಪೊಲೀಸ್ ಕಾನ್‌ಸ್ಟೆಬಲ್ ಮಹಿಳೆಯೊಂದಿಗೆ ಕಾರಿನಲ್ಲಿ ಅಶ್ಲೀಲವಾಗಿರುವ ಘಟನೆ ರಾಜಸ್ಥಾನದ ಜಾಲೋರ್‌ನಲ್ಲಿ ನಡೆದಿದೆ. ಸದ್ಯ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿವೆ.
ಈ ವಿಡಿಯೋದಲ್ಲಿ ಸರ್ವಾನಾ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಹನುಮಾನರಾಮ್, ಕಾರಿನಲ್ಲಿ ಮಹಿಳೆಯೊಂದಿಗೆ ರೊಮ್ಯಾನ್ಸ್ ಮಾಡಿಕೊಳ್ಳುವ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈ ವಿಡಿಯೋವನ್ನು ಗ್ರಾಮಸ್ಥರು ರೆಕಾರ್ಡ್ ಮಾಡಿದ್ದಾರೆ.
ಅಶ್ಲೀಲ ವಿಡಿಯೋಗಳು ವೈರಲ್ ಆದ ನಂತರ, ಜಾಲೋರ್‌ನ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನಚಂದ್ ಯಾದವ್ ಅವರು ಹನುಮಾನರಾಮ್ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.
ಈ ವಿಡಿಯೋ ಮೂರು-ನಾಲ್ಕು ದಿನಗಳಷ್ಟು ಹಳೆಯದು ಎಂದು ವರದಿಯಾಗಿದೆ. ಜಿಲ್ಲೆಯ ಗುಡಾಮಲಾನಿ ಪ್ರದೇಶದ ಗ್ರಾಮದ ಸ್ಥಳೀಯರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ, ಪೊಲೀಸ್ ಕಾನ್‌ಸ್ಟೆಬಲ್ ತನ್ನ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಮಹಿಳೆಯೊಂದಿಗೆ ಕಾಣಿಸಿಕೊಂಡಿದ್ದಾನೆ. ಒಂದೇ ಘಟನೆಯ ಮೂರು ವಿಭಿನ್ನ ವಿಡಿಯೋಗಳು ವೈರಲ್ ಆಗುತ್ತಿವೆ. ಐಪಿಎಸ್ ಅಧಿಕಾರಿ ಕಾಂಬ್ಳೆ ಶರಣ್ ಗೋಪಿನಾಥ್ ಅವರು ಈ ಪ್ರಕರಣದ ತನಿಖೆ ನಡೆಸಲಿದ್ದಾರೆ.