newsics.com
ಮಧ್ಯಪ್ರದೇಶ: 14 ವರ್ಷದ ಬಾಲಕಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಆಯತಪ್ಪಿ ಬಿದ್ದ ಘಟನೆ ಮಧ್ಯಪ್ರದೇಶದ ಅಶೋಕನಗರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಹತ್ತಿರದಲ್ಲಿದ್ದ ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ. ಈ ಘಟನೆ ರೈಲ್ವೆ ನಿಲ್ದಾಣದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಓಡುತ್ತಿರುವ ರೈಲಿಗೆ ಹತ್ತಲು ಓಡುವಾಗ ಆಯತಪ್ಪಿ ಬಿದ್ದಿದ್ದಾಳೆ. ಈ ವೇಳೆ ಹತ್ತಿರದಲ್ಲಿದ್ದ ಪೊಲೀಸ್ ಸಿಬ್ಬಂದಿ ಗೋವಿಂದ್ ಸಿಂಗ್ ಚೌಹಾಣ್ ಎಂಬುವರು ಕೂಡಲೇ ಆಕೆಯನ್ನು ರಕ್ಷಿಸಿದ್ದಾರೆ.
ಬಾಲಕಿ ರೈಲಿನ ಕೆಳಗೆ ಬೀಳುವುದನ್ನು ತಡೆದು ಆಕೆಯನ್ನು ರಕ್ಷಿಸಿದ್ದಾರೆ. ಇದರಿಂದ ಆಕೆಗೆ ಗಂಭೀರ ಗಾಯಗಳಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಜನ ಶ್ಲಾಘಿಸಿದ್ದಾರೆ. ಅಲ್ಲದೆ, ಇಂತಹ ಸಾಹಸಗಳಿಗೆ ಕೈ ಹಾಕದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯ ನಂತರ ರೈಲ್ವೆ ಅಧಿಕಾರಿಗಳು ಸುರಕ್ಷತಾ ಸಲಹೆಗಳನ್ನು ನೀಡಿದ್ದಾರೆ. ಪ್ರಯಾಣಿಕರು ರೈಲ್ವೆ ನಿಯಮಗಳನ್ನು ಪಾಲಿಸಬೇಕು. ರೈಲು ಚಲಿಸಲು ಪ್ರಾರಂಭಿಸಿದ ನಂತರ ಹತ್ತಲು ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದಾರೆ.
PM in Nagpur: 13 ವರ್ಷದ ಬಳಿಕ ಇಂದು RSS ಕೇಂದ್ರ ಕಚೇರಿಗೆ ನರೇಂದ್ರ ಮೋದಿ ಭೇಟಿ