newsics.com
ಬೆಂಗಳೂರು: ಕರ್ನಾಟಕದ ಪ್ರಮುಖ ದೇವಸ್ಥಾನಗಳ ಪ್ರಸಾದವನ್ನು ಭಕ್ತರ ಮನೆಗಳಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಈಗಾಗಲೇ ಚಾಲನೆ ನೀಡಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಬೇರೆ ರಾಜ್ಯಗಳ ಭಕ್ತರೂ ಕೂಡ ನಮ್ಮ ರಾಜ್ಯದ ದೇವಾಲಯಗಳ ಪ್ರಸಾದಕ್ಕೆ ಬೇಡಿಕೆ ಇಟ್ಟಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಇ-ಪ್ರಸಾದ ಸೇವೆಗೆ ಚಾಲನೆ ನೀಡಿದ್ದರು. ಕೆಲ ಸಂದರ್ಭದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ, ಅಂಥಾ ಸಂದರ್ಭದಲ್ಲಿ ಇ-ಪ್ರಸಾದ ಸೇವೆ ಮೂಲಕ ಆರ್ಡರ್ ಮಾಡಿ ಪ್ರಸಾದ ತರಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.
100 ರಿಂದ 200 ರೂಪಾಯಿಗಳಲ್ಲಿ ಮನೆ ಬಾಗಿಲಿಗೆ ಪ್ರಸಾದ ಕಳುಹಿಸಲಾಗುವುದು ಎಂದು ಹೇಳಿದ್ದರು. ಇದೀಗ ಐದು ಸಾವಿರಕ್ಕೂ ಹೆಚ್ಚು ಭಕ್ತರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಅದರಲ್ಲೂ ಮಹಾರಾಷ್ಟ್ರದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ, ಸವದತ್ತಿ ಯಲ್ಲಮ್ಮನ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ. ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಇದುವರೆಗೆ ಬಂದಿರುವ ಬೇಡಿಕೆಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಯಲ್ಲಮ್ಮ ಹಾಗೂ ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಹೆಚ್ಚಿನ ಬೇಡಿಕೆ ಸಿಕ್ಕಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಮುಂಬರುವ ದಿನಗಳಲ್ಲಿ ಮೊಬೈಲ್ ನಿಂದ ಆರ್ಡರ್ ಮಾಡಿ ತರಿಸಿಕೊಳ್ಳಬಹುದು.
BIG UPDATE: ಮ್ಯಾನ್ಮಾರ್ ಪ್ರಬಲ ಭೂಕಂಪ – ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ ಗಾಯ