newsics.com
ಲಕ್ನೋ: ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗ್ರೇಟರ್ ನೋಯ್ಡಾದ ಇಕೋಟೆಕ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ಮೂರು ಕಾರ್ಖಾನೆಗಳು ಸಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸೋಮವಾರ ಮಧ್ಯಾಹ್ನ 1:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಉಳಿದ ಕಾರ್ಖಾನೆಗಳಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಅಲ್ಲದೇಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಢ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
https://www.newsics.com/2025/03/31/watchman-gets-into-trouble-after-going-to-pet-a-dog/