newsics. com
ಮುಂಬೈ: ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಅವರ ಇತ್ತೀಚಿನ ಭೇಟಿ ನೀಡಿದ್ದರು. ಈ ಕುರಿತು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್ ಅವರು ಕಳೆದ 10ರಿಂದ 11 ವರ್ಷಗಳಲ್ಲಿ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೆ ಈಗ ಮೋದಿ ಬಹುಶಃ ತಮ್ಮ ನಿವೃತ್ತಿ ಅರ್ಜಿಯನ್ನು ಸಲ್ಲಿಸಲು ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಹೋಗಿರಬಹುದು ಎಂದು ಸಂಜಯ್ ರಾವತ್ ಹೇಳಿದ್ದಾರೆ. ಆರ್‌ಎಸ್‌ಎಸ್ ಭಾರತದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತಿದೆ. ನಾನು ಅರ್ಥ ಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯನ್ನು ಆರ್‌ಎಸ್‌ಎಸ್ ನಿರ್ಧರಿಸುತ್ತದೆ ಮತ್ತು ಅವರು ಮಹಾರಾಷ್ಟ್ರದವರಾಗಿರುತ್ತಾರೆ ಎಂದು ಸಂಜಯ್ ರಾವತ್ ಹೇಳಿದರು.