newsics.com
ಬೆಂಗಳೂರು: ಓಡಿಸ್ಸಾ ಕರಾವಳಿಯಲ್ಲಿ ಸೈಕ್ಲೋನ್ ನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 6ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಆಲಿಕಲ್ಲು ಮಳೆಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
https://www.newsics.com/2025/03/31/what-did-he-do-when-he-couldnt-find-a-girl-to-marry/