newsics.com
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ . 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಕಾರಣ ಎಂಬುದು ಎಐಎಡಿಎಂಕೆ ಪಕ್ಷದ ಅಸಮಾಧಾನಕ್ಕೆ ಪ್ರಮುಖ ಕಾರಣ. ಅಲ್ಲದೇ ಜಾತಿ ಸಮೀಕರಣಗಳ ಕಾರಣದಿಂದಲೂ ಅಣ್ಣಾಮಲೈ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುವ ಸಾಧ್ಯತೆಗಳಿವೆ.
ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ನಡುವೆ ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
https://www.newsics.com/2025/04/01/waqf-amendment-bill-to-be-tabled-in-lok-sabha-tomorrow/