newsics.com
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಾಳೆ ಸುಪ್ರೀಂಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ. ಇಂದು ಸರ್ಕಾರಿ ಪರ ವಕೀಲರು ದರ್ಶನ್ ಪ್ರಕರಣ ಅರ್ಜಿ ವಿಚಾರವನ್ನು ಪ್ರಸ್ತಾಪ ಮಾಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ರೆ ಮತ್ತೆ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಸಂಕಷ್ಟ ಎದುರಾಗಲಿದೆ.