newsics.com
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಬಹುತೇಕ ಮುಂದಿನ ವಾರ ಪ್ರಕಟವಾಗುವ ನಿರೀಕ್ಷೆ ಇದೆ.
ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
https://www.newsics.com/2025/04/01/mysterious-death-of-elderly-woman-who-lived-alone/