KSRTC BUS ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ: ಇಬ್ಬರು ಸಾವು

newsics.com ಮೈಸೂರು: KSRTC ಬಸ್ ಚಾಲಕನಿಗೆ ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತ ಸಂಭವಿಸಿದಕ್ಕೆ ಪಾದಚಾರಿ ಮಹಿಳೆಯೂ ಮೃತಪಟ್ಟ ಘಟನೆ ಮೈಸೂರಿನ ಹೆಚ್.ಡಿ.ಕೋಟೆಯ ದಮ್ಮನಕಟ್ಟೆ ಬಳಿ ನಡೆದಿದೆ. ಲಕ್ಷ್ಮಮ್ಮ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂದೆ ವಿದ್ಯುತ್ ಕಂಬಕ್ಕೆ ಗುದ್ದಿ, ನಂತರ ಜಮೀನೊಳಗೆ ನುಗ್ಗಿದೆ. ಆದರೆ ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಪ್ರಕರಣದ ಬಗ್ಗೆ ಎಚ್‌.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. … Continue reading KSRTC BUS ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ: ಇಬ್ಬರು ಸಾವು