newsics.com
ಬೆಳಗಾವಿ: ಶಾಸಕ ರಾಜು ಕಾಗೆಯ ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಬಸವರಾಜ ಪುಡಕಲಕಟ್ಟಿ (22) ಎಂದು ಗುರುತಿಸಲಾಗಿದ್ದು, ಈತ ಗೋಕಾಕ್ ಮೂಲದ ನಿವಾಸಿ.
ಅವಘಡದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೇಳೆ ಶಾಸಕರ ಸಹೋದರನ ಪುತ್ರ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Darshan Thoogudeepa: ನಟ ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪ – ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ