newsics.com
ಬೆಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಜಗ್ಗೇಶ್ ಅವರು ನಿರ್ಮಾಪಕ ಎಂ. ಎನ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದರು ಎನ್ನಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸರು ನಿರ್ಮಾಪಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು,
ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಕುಮಾರ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಇದೇ ಪ್ರಕರಣ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಸ್ಯಾಂಡಲ್‌ವುಡ್‌ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಎಂ.ಎನ್. ಕುಮಾರ್ ʼಅಂಜನಿ ಪುತ್ರʼ, ʼಮುಕುಂದ ಮುರಾರಿʼ, ʼಮಾಣಿಕ್ಯʼ, ʼಐಶ್ವರ್ಯಾʼ, ʼಕಾಶಿ ಫ್ರಮ್ ವಿಲೇಜ್ʼ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ಈ ಹಿಂದೆ ಎಂಎನ್ ಕುಮಾರ್ ಅವರು ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿ ಸುದ್ದಿಯಾಗಿದ್ದರು.
Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್ ರೇಪ್