newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಜೋರು ಗಾಳಿ-ಮಳೆಗೆ ಭಾರಿ ಗಾತ್ರದ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ.ರಾಜಾಜಿನಗರ, ಮಹದೇವಪುರ, ಲಿಂಗರಾಜಪುರ, ಜಯನಗರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿವೆ. ರಾಜಾಜಿನಗರದಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ನಾಲ್ಕು ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ಮರದ ಕೊಂಬೆಗಳು ಕಾರುಗಳ ಮೇಲೆ ಬಿದ್ದು ಗಾಜುಗಳು ಪುಡಿಪುಡಿಯಾಗಿವೆ. ಬಿಬಿಎಂಪಿ ಸಿಬ್ಬಂದಿ ಮರಗಳನ್ನು ತೆರವುಗೊಳಿಸುತ್ತಿದ್ದಾರೆ.