newsics.com
ಬೆಂಗಳೂರು: ಚಿರಟೆಯೊಂದು ಮನೆ ಒಳಗೆ ನುಗ್ಗಿದ ಘಟನೆ ಜಿಗಣಿಯ ಕುಂಟ್ಲುರೆಡ್ಡಿ ಲೇಔಟ್ನಲ್ಲಿ ನಡೆದಿದೆ.
ವೆಂಕಟೇಶ್ ಎಂಬುವವರು ಇವತ್ತು ಬೆಳಗ್ಗೆ ಎದ್ದ ಕೂಡಲೇ ಅವರಿಗೆ ಚಿರತೆ ಕಣ್ಣಿಗೆ ಬಿದ್ದಿದೆ. ವೆಂಕಟೇಶ್ ಮನೆಯಿಂದ ಹೊರಗಡೆ ಬರ್ತಿದ್ದಂತೆ ಚಿರತೆ ಮನೆಯೊಳಗೆ ಎಂಟ್ರಿ ಕೊಟ್ಟಿದೆ. ಕೂಡಲೇ ವೆಂಕಟೇಶ್ ಮನೆ ಬಾಗಿಲನ್ನು ಲಾಕ್ ಮಾಡಿ ಹೊರಗೆ ಬಂದಿದ್ದಾರೆ. ಮನೆಗೆ ನುಗ್ಗಿದ್ದ ಚಿರತೆಯನ್ನು ಲಾಕ್ ಮಾಡಿದ್ದಾರೆ.
ನಿನ್ನೆ ರಾತ್ರಿಯಿಡೀ ಮಂಜುನಾಥ್ ಎಂಬುವರಿಗೆ ಸೇರಿದ ಬಿಲ್ಡಿಂಗ್ನಲ್ಲಿ ರೌಂಡ್ಸ್ ಹಾಕಿರುವ ಚಿರತೆ ಬೆಳಗ್ಗೆ ಬಾಡಿಗೆದಾರ ವೆಂಕಟೇಶ್ ಮನೆಯೊಳಗೆ ಹೋಗಿದೆ. ಕೂಡಲೇ ಮನೆ ಬಾಗಿಲನ್ನು ಲಾಕ್ ಮಾಡಿದ ವೆಂಕಟೇಶ್ ಅವರು ಚಿರತೆ ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ.
ವೆಂಕಟೇಶ್ ಹಾಗೂ ಸ್ಥಳೀಯರು ಮನೆಯೊಳಗೆ ಚಿರತೆಯನ್ನು ಲಾಕ್ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಸಮೇತ ವೆಂಕಟೇಶ್ ಅವರ ಮನೆಗೆ ಆಗಮಿಸಿದ್ದಾರೆ. ಚಿರತೆಗೆ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಸತತ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ.4 ಗಂಟೆಗಳ ಕಾಲ ಸತತ ಕಾರ್ಯಾಚರಣೆ ಬಳಿಕ ಕಡೆಗೂ ಚಿರತೆ ಬೋನಿಗೆ ಬಿದ್ದಿದೆ.
https://www.newsics.com/2025/04/03/dog-thrown-from-moving-train/