newsics.com
ರಾಜ್ಯದ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದರೆ, ಇನ್ನು ಕೆಲವೆಡೆ ತುಂತುರು ಮಳೆಯಾಗಿತ್ತು. ಇದೀಗ ಮತ್ತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ತಿಳಿಸಿದಂತೆ, ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗದಲ್ಲಿ ಗಾಳಿಸಹಿತ ಗುಡುಗು ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಗದಗ, ಬೀದರ್ ಜಿಲ್ಲೆಯಲ್ಲಿ ಕೂಡ ಭಾರೀ ಗಾಳಿ ಸಹಿತ ಗುಡುಗು, ಮಳೆ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಇನ್ನು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BJP PROTEST : ದರ ಏರಿಕೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ : ಫ್ರೀಡಂ ಪಾರ್ಕ್ನಲ್ಲೇ ಮಲಗಿದ ಕಮಲ ನಾಯಕರು