newsics.com
ಚೆನ್ನೈ: ಹೈಕಮಾಂಡ್ ಸೂಚನೆ ಮೇರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಬಿಜೆಪಿಯಲ್ಲಿ ಯಾವುದೇ ಸ್ಪರ್ಧೆ ಇಲ್ಲ, ನಾವು ಸರ್ವಾನುಮತದಿಂದ ನಾಯಕನನ್ನು ಆಯ್ಕೆ ಮಾಡುತ್ತೇವೆ.
ಆದರೆ ನಾನು ರೇಸ್‌ನಲ್ಲಿಲ್ಲ. ಬಿಜೆಪಿ ರಾಜ್ಯ ನಾಯಕತ್ವ ರೇಸ್‌ನಲ್ಲಿ ನಾನು ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆಯಲ್ಲಿ ಸಲ್ಲಿಸಿದಂತೆ ಆಗಿದೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಎಐಎಡಿಎಂಕೆ ಮುಖ್ಯಸ್ಥ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಭೇಟಿಯಾದ ಒಂದು ವಾರದ ನಂತರ ಈ ಬೆಳವಣಿಗೆ ನಡೆದಿದೆ.
ವರದಿಗಳ ಪ್ರಕಾರ, ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳೇ ಅಣ್ಣಾಮಲೈ ನಿರ್ಗಮನಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಏ. 7 ರಂದು ನಡೆಯಲಿದ್ದು, ಏ. 9 ರಂದು ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಏ. 7 ರಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದು, ಹೊಸ ರಾಜ್ಯ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ACTOR DARSHAN: ಶೂಟಿಂಗ್ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್ʼ ದರ್ಶನ್