newsics.com
ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ.
ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.
ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ಅನ್ವರ್ ಮಾಣಿಪ್ಪಾಡಿ ಅವರಿಗೆ ವಕ್ಫ್ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ವಿದೇಶಿ ಸಂಖ್ಯೆಗಳಿಂದ ಇಂಟರ್ನೆಟ್ ಮೂಲಕ ಕರೆ ಮಾಡಿ ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಕನ್ನಡ ಸೇರಿ ಹಲವಾರು ಭಾಷೆಗಳಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದಾರೆ.
ಕರೆ ಮಾಡಿದವರೆಲ್ಲ ನಿನ್ನನ್ನು ಬಿಡುವುದಿಲ್ಲ, ನಿಮ್ಮ ಸಮುದಾಯದವರೇ ನಿನ್ನನ್ನು ಒಂದು ಗತಿ ಕಾಣಿಸುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಬಗ್ಗೆ ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್ಗೆ ದೂರು ನೀಡಿದ್ದು, ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.
ಬೆದರಿಕೆಗೂ ಮುನ್ನ ವಕ್ಫ್ ತಿದ್ದುಪಡಿ ಕಾಯ್ದೆ ಅನುಮೋದನೆ ಸಿಕ್ಕಿರೋದು ಖುಷಿ ತಂದಿದೆ ಎಂದು ಅನ್ವರ್ ಮಾಣಿಪ್ಪಾಡಿ ಹೇಳಿದ್ದರು. ಅಲ್ಲದೇ ನನ್ನ ವರದಿಯ ಆಧಾರದಲ್ಲೇ ಕೇಂದ್ರದ ಈ ತಿದ್ದುಪಡಿ ಮಸೂದೆ ಜಾರಿ ಆಗಿದೆ ಎಂದು ಹೇಳಿದ್ದರು. ಸದ್ಯ ಈ ಸಂಬಂಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Diesel price hike ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ನಡೆಸಲು ಚಿಂತನೆ