newsics.com
ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಊರಿನಿಂದಲೇ ಬಹಿಷ್ಕಾರ ಹಾಕಿದ್ದು, ಜೊತೆಗೆ 6,000 ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳುವಾರೆ ಗ್ರಾಮದಲ್ಲಿ ನಡೆದಿದೆ.
ಬೇರೆಯವರ ಕಷ್ಟಕ್ಕೆ ಸ್ಪಂದಿಸಿದ್ದಕ್ಕೆ ಗ್ರಾಮದ ಭೈರಪ್ಪ ಎಂಬುವವರನ್ನು ಊರಿನಿಂದಲೇ ಬಹಿಷ್ಕಾರ ಹಾಕಿದ್ದಾರೆ. ಆ ಮನೆಯವರ ಜೊತೆ ಯಾರೂ ಮಾತನಾಡುವಂತಿಲ್ಲ, ಮನೆಗೆ ಯಾರೂ ಹೋಗುವಂತಿಲ್ಲ, ತೋಟದ ಕೆಲಸಕ್ಕೂ ಹೋಗುವಂತಿಲ್ಲ. ಮಗನ ಮದುವೆಗೆ ಯಾರೂ ಹೋಗಿಲ್ಲ. ಯಾರಾದರೂ ಇದಕ್ಕೆ ವಿರೋಧವಾಗಿ ನಡೆದುಕೊಂಡರೆ ಅವರಿಗೂ 5,000 ದಂಡ. ಇದೀಗ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಪಟ್ಟಿರುವ ಭೈರಪ್ಪ ನ್ಯಾಯಕ್ಕಾಗಿ ಡಿಸಿ ಕಚೇರಿ, ಪೋಲಿಸ್ ಸ್ಟೇಷನ್ ಅಲೆದಾಡುತಿದ್ದಾರೆ.