newsics.com
ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬದಲಾವಣೆ ಮಾಡಲಾಗಿದೆ.
ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‌ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
Nithyananda ನಿತ್ಯಾನಂದನ 20 ಶಿಷ್ಯರನ್ನು ಬಂಧಿಸಿದ ಬೊಲಿವಿಯ ಪೊಲೀಸರು