newsics.com
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಂತೆ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ ಹೈಕೋರ್ಟ್, ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಲು ಸೂಚಿಸಿದೆ. ಯೋಗೇಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ್ದ ಅರ್ಜಿ ಕೂಡ ಇದೆ ವೇಳೆ ವಜಾಗೊಂಡಿತು.