newsics.com
ಬೆಂಗಳೂರು: ಬೋವಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ 10 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆದಿದೆ.
ಬೆಂಗಳೂರಿನಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿ, ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಲೀಲಾವತಿ ಅವರಿಗೆ ಸೇರಿದ ಜಾಲಹಳ್ಳಿಯ ಮನೆ ಹಾಗೂ ಪ್ರಧಾನ ವ್ಯವಸ್ಥಾಪಕರಾಗಿದ್ದ ಡಾ.ಬಿ.ಕೆ. ನಾಗರಾಜಪ್ಪ ಅವರಿಗೆ ಸೇರಿ ಹಲವರ ನಿವಾಸಗಳ ಮೇಲೆ ದಾಳಿಯಾಗಿದೆ. ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾ ಕಲ್ಯಾಣ ಯೋಜನೆ ಸೇರಿ ಹಲವು ಯೋಜನೆಗಳಲ್ಲಿ 160 ಕೋಟಿ ರೂಪಾಯಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಕೇಳಿಬಂದಿತ್ತು.
https://www.newsics.com/2025/04/05/snack-prices-also-increased/