Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ದೇಶ

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

Share
2 Min Read
SHARE

newsics.com

ತಮಿಳುನಾಡು: ಆ ಪ್ರದೇಶಕ್ಕೆ ರೈಲು ಸಂಪರ್ಕ ಕಲ್ಪಿಸದೇ ಇದ್ದರೇ ಭಾರತದೊಂದಿಗೆ ಸಂಪರ್ಕವೇ ಇರುತ್ತಿರಲಿಲ್ಲ. ರೈಲು ಮಾರ್ಗದೊಂದಿಗೆ ಸಂಪರ್ಕ ಪಡೆದಂತ ಭಾರತದ ಭೂ ಭಾಗವೇ ರಾಮೇಶ್ವರಂ. ಈ ನಗರಕ್ಕೆ ಸಂಪರ್ಕ ಕಲ್ಪಿಸಿದ್ದೇ ಪಂಬನ್ ಸೇತುವೆ. ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರಕ್ಕೆ ನೂತನ ಸಮುದ್ರ ರೈಲು ಸೇತುವೆ ಸಿದ್ಧಗೊಂಡಿದೆ.

ಇಂತಹ ದೇಶದ ಮೊದಲ ಲಿಫ್ಟ್ ಸೇತುವೆ ರಾಮೇಶ್ವರಂನ ಪಂಬನ್ ಪ್ರಿಡ್ಜ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಅದರ ವಿಶೇಷತೆ ಏನು ಅಂತ ಮುಂದಿದೆ ಓದಿ.

ರಾಮೇಶ್ವರಂ ದ್ವೀಪಕ್ಕೆ ಭಾರತೀಯ ರೈಲ್ವೆಯಿಂದ ಸಂಪರ್ಕ

ಒಂದು ಕಾಲದಲ್ಲಿ ಆ ಭೂ ಭಾಗ ಸುತ್ತಲೂ ಸಮುದ್ರದಿಂದ ಆವೃತ್ತವಾಗಿ ದ್ವೀಪವಾಗಿತ್ತು. ಆ ದ್ವೀಪಕ್ಕೆ ಸಂಪರ್ಕ ಕಲ್ಪಿಸಿದ್ದು ರೈಲ್ವೆ ಸಾರಿಗೆ ಸಂಚಾರದ ಮೂಲಕ. ಈಗ ರಸ್ತೆ, ರೈಲು ಮಾರ್ಗದ ಮೂಲಕ ಜೊತೆಗೆ ಬೆಸೆದುಕೊಂಡಿರೋದೇ ರಾಮೇಶ್ವರಂ. ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪಟ್ಟಣಕ್ಕೆ ರೈಲು ಸಾರಿಗೆ ಮೂಲಕ ಮತ್ತೊಮ್ಮೆ ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ಸಿದ್ಧವಾಗಿದೆ. ಇದಕ್ಕಾಗಿ ಭಾರತದ ಮೊದಲ ವರ್ಟಿಕಲ್ ಲಿಫ್ಟಿಂಗ್ ಸೇತುವೆಯನ್ನು ನಿರ್ಮಿಸಲಾಗಿದೆ.

1914ರಲ್ಲಿ ನಿರ್ಮಿಸಿದ್ದ ಸೇತುವೆ ಹಾನಿ

1914ರಲ್ಲಿ ರಾಮೇಶ್ವರಂ ದ್ವೀಪಕ್ಕೆ ಮೀಟರ್ ಗೇಜ್ ರೈಲ್ವೆ ಟ್ರ್ಯಾಕ್ ನಿರ್ಮಾಣ ಮಾಡಲಾಗಿತ್ತು. 1964ರಲ್ಲಿ ಉಂಟಾದಂತ ಚಂಡಮಾರುತಕ್ಕೆ ಸಿಕ್ಕು ರೈಲು ಸೇತುವೆ ಹಾನಿಯಾಗಿತ್ತು. ಆಗ ದುರಸ್ತಿಗೊಳಿಸಿ ರೈಲು ಮಾರ್ಗವನ್ನು ಮೀಟರ್ ಗೇಜ್ ನಿಂದ ಬ್ರಾಡ್ ಗೇಜ್ ಗೆ ಪರಿವರ್ತಿಸಲಾಗಿತ್ತು. ಹೀಗೆ ನಿರ್ಮಿಸಿದ್ದಂತ ಸೇತುವೆಗೆ 110 ವರ್ಷಗಳಾಗುತ್ತಿವೆ. ಇಷ್ಟು ಹಳೆಯ ಸೇತುವೆಯು ಅಲ್ಲಲ್ಲಿ ಹಾನಿಗೊಂಡ ಪರಿಣಾಮ ಹೊಸ ಸೇತುವೆಯನ್ನು ಅದರ ಪಕ್ಕದಲ್ಲೇ ನಿರ್ಮಿಸಲು ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿತು.

ಫೆಬ್ರವರಿ 2019ರಲ್ಲಿ ಕೇಂದ್ರ ರೈಲ್ವೆ ಸಚಿವಾಲಯವು ನೂತನ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿತು. ಆ ಮೂಲಕ ಭಾರತದ ಮೊದಲ ವರ್ಟಿಕಲ್ ಲಿಫ್ಟಿಂಗ್ ಸೇತುವೆ ನಿರ್ಮಾಣಕ್ಕೆ ಮುನ್ನುಡಿ ಬರೆಯಲಾಯಿತು.

ಫೆಬ್ರವರಿ 2019ರಲ್ಲಿ ಭಾರತದ ಮೊದಲ ವರ್ಟಿಕಲ್ ಲಿಫ್ಟಿಂಗ್ ಸೇತುವೆ ನಿರ್ಮಾಣ ಆರಂಭ

ಕೇಂದ್ರ ರೈಲ್ವೆ ಸಚಿವಾಲಯವು ಬರೋಬ್ಬರಿ 531 ಕೋಟಿ ವೆಚ್ಚದಲ್ಲಿ ಭಾರತದ ಮೊದಲ ವರ್ಟಿಕಲ್ ಲಿಫ್ಟಿಂಗ್ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನಂತ್ರ, ಫೆಬ್ರವರಿ 2019ರಲ್ಲಿ ಸೇತುವೆ ನಿರ್ಮಾಣ ಕಾರ್ಯ ಆರಂಭಗೊಂಡಿತು. ಸಮುದ್ರದ ಆಳದಲ್ಲಿ ಕಬ್ಬಿಣ ಹಾಗೂ ಸಿಮೆಂಟ್ ಬಳಸಿ ಕಂಬಗಳನ್ನು ನಿರ್ಮಾಣ ಮಾಡಿ ಸೇತುವೆಯನ್ನು ನಿರ್ಮಿಸಲಾಗಿದೆ. RVNLನ ಬಿ.ಕೆ ರೆಡ್ಡಿ ಕಂಪನಿಯು ರಾಮೇಶ್ವರಂ ಸಮುದ್ರ ತೀರದಲ್ಲಿ ವರ್ಟಿಕಲ್ ರೈಲು ಸೇತುವೆ ನಿರ್ಮಾಣವನ್ನು ಆರಂಭಿಸಿ, ನವೆಂಬರ್ 2024ರಲ್ಲಿ ಮುಕ್ತಾಯಗೊಳಿಸಿದೆ.

333 ಕಂಭಗಳ ಮೇಲೆ ರೈಲು ಸಂಚಾರ

333 ಕಂಭಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸಮುದ್ರದಲ್ಲಿ ಹುದುಗಿಸಿ ವರ್ಟಿಕಲ್ ಸೇತುವೆಯನ್ನು ನಿರ್ಮಿಸಲಾಗಿದೆ. 2.10 ಕಿಲೋಮೀಟರ್ ದೂರದ ಈ ರೈಲು ಸೇತುವೆ ಮೇಲೆ ಸುಮಾರು 75 ರಿಂದ 80 ಕಿಲೋಮೀಟರ್ ವೇಗದ ಮಿತಿಯಲ್ಲಿ ರೈಲು ಸಂಚಾರಕ್ಕೂ ಅನುಮತಿ ನೀಡಲಾಗಿದೆ.

3,38,014 ಬ್ಯಾಗ್ ಸಿಮೆಂಟ್ ಬಳಕೆ

38 ಮೀಟರ್ ಆಳದವರೆಗೆ ಸಮುದ್ರದಲ್ಲಿ ಸೇತುವೆಯ ಕಂಭಗಳನ್ನು ನೆಟ್ಟು ಸುನಾಮಿ ಸೇರಿದಂತೆ ಇತರೆ ಪ್ರಕೃತಿ ವಿಕೋಪಗಳಂತ ಸಂದರ್ಭದಲ್ಲೂ ಹಾನಿಯಾಗದಂತೆ 4500 ಎಂಟಿ ಸಾಮರ್ಥ್ಯದ ಸ್ಟೇನ್ ಲೆಸ್ ಸ್ಟೀಲ್ ಬಳಸಿ ಕಂಭಗಳನ್ನು ನಿರ್ಮಿಸಲಾಗಿದೆ. 25,000 ಸಿಯುಎಂ ಕ್ವಾಲಿಟಿಯ ಸಿಮೆಂಟ್ ಅನ್ನು ಕಂಭಗಳ ನಿರ್ಮಾಣಕ್ಕೆ ಬಳಸಲಾಗಿದೆ. 333 ಪಿಲ್ಲೋಗಳನ್ನು ನಿರ್ಮಿಸಲು 3,38,014 ಬ್ಯಾಗ್ ಸಿಮೆಂಟ್ ಬಳಕೆ ಮಾಡಲಾಗಿದೆ.

26ನೇ ವಯಸ್ಸಿಗೆ ‘ಸನ್ಯಾಸತ್ವ’ ಸ್ವೀಕರಿಸಿದ ಕೋಟ್ಯಾಧೀಶ್ವರನ ಪುತ್ರಿ

TAGGED:Prime Minister Modi inaugurated the country's first vertical railway bridge
Share This Article
Facebook Twitter Copy Link Print
Previous Article heart attack ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತಿದ್ದಾಗ ಕುಸಿದು ಬಿದ್ದು ಯುವತಿ ಸಾವು!
Next Article ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?