newsics.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಜಾಮೀನು ಸಿಕ್ಕಿದ್ದರೂ ಆಗಾಗ ವಿಚಾರಣೆ ಎದುರಿಸಬೇಕಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆದಿದೆ.
ಆದರೆ ಇಂದು ಕೋರ್ಟ್ ಗೆ ನಟ ದರ್ಶನ್ ಗೈರಾಗಿದ್ದರು. ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇಂತಹ ನೆಪವೊಡ್ಡಿ ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು ಎಂದು ನಟ ದರ್ಶನ್ ಪರ ವಕೀಲರಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.
ಪವಿತ್ರಾ ಗೌಡ ಜೊತೆ ನಂದೀಶ್ ಸೇರಿದಂತೆ ಹಲವು ಆರೋಪಿಗಳು ಹಾಜರಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ನಂತರ ಕೋರ್ಟ್ ಎಲ್ಲಾ 17 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
DINESH GUNDURAO : ನೀರಿನ ಬಾಟಲ್ ಖರೀದಿಸುವ ಮುನ್ನ ಎಚ್ಚರ: ಶಾಕಿಂಗ್ ವಿಚಾರ ತಿಳಿಸಿದ ದಿನೇಶ್ ಗುಂಡೂರಾವ್