newsics.com
ಯಾದಗಿರಿ: ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ ಹೊಲದಲ್ಲಿ ಮೂರು ಲಕ್ಷ ರುಪಾಯಿಗಳ ನಾಲಾ ಹೂಳೆತ್ತುವ ಕಾಮಗಾರಿ ಸಂದರ್ಭದಲ್ಲಿ ಗಂಡಸರಿಗೆ ಸೀರೆ ಉಡಿಸಿದ್ದಾರೆ, ಹೆಂಗಸರ ಲೆಕ್ಕದಲ್ಲಿ ಹಣ ಲಪಟಾಯಿಸುವ ಸಂಚು ನಡೆದಿರುವ ಬಗ್ಗೆ ಭಾವಚಿತ್ರಗಳು ಸಾಮಾಜಿಕ ಜಾಲತಾಣ-ಮಾಧ್ಯಮಗಳಲ್ಲಿ ಸೋಮವಾರ ಭಾರಿ ಸಂಚಲನ ಮೂಡಿಸಿತ್ತು.
ನಾಲ್ವರು ಪುರುಷರಿಗೆ ಸೀರೆ ಉಡಿಸಿ, ಹೆಂಗಸರಂತೆ ಬಿಂಬಿಸಿ, ಕೂಲಿ ಹಣ ದುರ್ಬಳಕೆ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಬಗ್ಗೆ ಸಂಜೆ ವೇಳೆಗೆ ಸ್ಪಷ್ಟನೆ ನೀಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ (ಸಿಇಒ) ಲವೀಶ ಒರಡಿಯಾ ಅವರು ಫೆಬ್ರವರಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಆಗಲೇ ಬಂದ ದೂರಿನ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೀರೇಶ ಎಂಬ ಹೊರಗುತ್ತಿಗೆ ನೌಕರರನ್ನು ಅಮಾನತು ಮಾಡಲಾಗಿದೆ.