newsics.com
ಹೈದರಾಬಾದ್: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಗರ್ಭಿಣಿ ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್ ಪೊಲೀಸ್ ಕಮಿಷನರೇಟ್‌ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ ನಡೆದಿದೆ. ಈ ಆಘಾತಕಾರಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ.
ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ. ಬಳಿಕ ಸತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು. ತಲೆಗೆ ಗಂಭೀರವಾದ ಗಾಯಗಳಾಗಿದ್ದರಿಂದ ಅವರು ಕೋಮಾಕ್ಕೆ ಜಾರಿದ್ದಾರೆ.
https://www.newsics.com/2025/04/08/melukote-vairamudi-festival-held-with-great-enthusiasm/