newsics.com
ಬೆಂಗಳೂರು: ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ.
ಸಾರ್ವಜನಿಕ ರಜಾ ದಿನಗಳಂದು ಮಾತ್ರವೇ ಈ ಟೂರ್ ಗೈಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರು ಶುಲ್ಕ ಪಾವತಿಸಿ, ವೀಕ್ಷಣೆ ಮಾಡಬಹುದಾಗಿದೆ.
ಅಂದಹಾಗೇ ಸಾರ್ವಜನಿಕ ರಜಾ ದಿನಗಳಂದು ತಲಾ 30ರಂತೆ ತಂಡಗಳನ್ನು ವಿಭಜಿಸಿ, ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಈ ಪ್ರತಿ ತಂಡದ ಮೇಲ್ವಿಚಾರಣೆಗೆ ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಯೊಬ್ಬರು ಇರುತ್ತಾರೆ. ಇದರ ಉಸ್ತುವಾರಿಯನ್ನಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ.
ಪ್ರವಾಸಿಗರು ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ರೂಟ್ ಮ್ಯಾಪ್ ನಂತೆ ವಿಧಾನಸೌಧ ವೀಕ್ಷಣೆ ಮಾಡಿಸಬೇಕು. ವಿಧಾನಸೌಧಕ್ಕೆ, ಉದ್ಯಾನವನ, ಪ್ರತಿಮೆಗಳಿಗೆ ಯಾವುದೇ ಹಾನಿ ಉಂಟು ಮಾಡದಂತೆ ಟೂರ್ ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಲಾಗುತ್ತದೆ.
Supreme Court ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವಂತಿಲ್ಲ : ಸುಪ್ರೀಂ ಕೋರ್ಟ್