newsics.com
ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಹಗರಣ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇದರ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಅವರನ್ನು 14 ದಿನಗಳ ಇಡಿ ಕಸ್ಟಡಿಗೆ ನೀಡಲಾಗಿದೆ.
ಇಂದು ಅವರನ್ನು 1ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಕೋರ್ಟ್ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಮಂಗಳವಾರ (ಏ.8) ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಅವರ ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್‌ಹೌಸ್ ಮೇಲೂ ದಾಳಿ ನಡೆಸಲಾಗಿತ್ತು.
https://www.newsics.com/2025/04/09/she-left-her-husband-and-married-her-insta-lover/